Saturday, 30 May 2020

*ಪಂಚ‌ಪ್ರಾಣಗಳು ಎಂದರೇನು ಮತ್ತು ಅದರ ಮಹತ್ವ.*

*ಪಂಚ‌ಪ್ರಾಣಗಳು ಎಂದರೇನು ಮತ್ತು ಅದರ ಮಹತ್ವ.*

ಮೊದಲು ಪ್ರಾಣ ಎಂದರೆ ಏನು ಎನ್ನುವುದು?
*ಪ್ರಾಣ ಎಂದರೆ ವಾಯುವು, ವಾಯುವೇ ಪ್ರಾಣ.*

ಈ ವಾಯುವು ಮಾನವನ ದೇಹದಲ್ಲಿ ಐದು ಮುಖ್ಯ ವಾಯುಗಳಾಗಿ ಕಾರ್ಯವನ್ನು ನಿರ್ವಹಿಸುತ್ತದೆ. ಆ ಐದು ಮುಖ್ಯ ಕಾರ್ಯಗಳನ್ನು ಪಂಚ ಪ್ರಾಣಗಳು ಎಂದು ಕರೆಯುತ್ತೇವೆ.

ಪಂಚ ಎಂದರೆ ಐದು
ಪ್ರಾಣ ಎಂದರೆ ವಾಯು
ಜೀವಿಗಳ ದೇಹದಲ್ಲಿ ಇರುವ ಐದು ವಾಯುಗಳು...

*1. ಪ್ರಾಣ, 2. ಅಪಾನ, 3. ವ್ಯಾನ, 4. ಉದಾನ, 5. ಸಮಾನ*

*1. ಪ್ರಾಣ ವಾಯುವು* - ಮೂಗಿನ ಮುಖಾಂತರ ಹೃದಯವನ್ನು ಪ್ರವೇಶಮಾಡಿ ನಂತರ ದೇಹದ ಎಲ್ಲಾ ಭಾಗಗಳಿಗೂ ಇದು ರವಾನೆಯಾಗುತ್ತದೆ. ಅದಕ್ಕೆ ಇದನ್ನು ಪ್ರಾಣ ವಾಯು ಎಂದು ಮತ್ತು ಪಂಚ ಪ್ರಾಣಗಳಲ್ಲಿ ಇದು ಮೊದಲಿನದು.

*2. ಅಪಾನ ವಾಯುವು* - ಇದು ಪಂಚ ಪ್ರಾಣಗಳಲ್ಲಿ ಎರಡೆನೆಯದು. ಶ್ವಾಸಕೋಶ ಮತ್ತು ಇತರೆ ಕೆಲವು ಭಾಗಗಳಲ್ಲಿ ಇರುತ್ತದೆ ಮಲ ಮೂತ್ರಗಳ ವಿಸರ್ಜನೆಗೆ, ಈ ವಾಯುವು ಸಹಾಯವಾಗುತ್ತದೆ. ಇದು ಒಂದು ರೀತಿಯ Pushing ರೀತಿಯಲ್ಲಿ ಸಹಾಯ ಆಗುತ್ತದೆ.

*3. ವ್ಯಾನ ವಾಯುವು* - ಇದು ಮೂರನೇ ವಾಯು. ಇದು ಕೈಕಾಲುಗಳ, ದೇಹದ ಭಾಗಗಳು ಅಂದರೆ ದೇಹದ ಭಾಗಗಳ ಸಂಕೋಚನೆ ವ್ಯಾಕೋಚನಗಳಿಗೆ ಸಹಾಯ ಆಗುತ್ತದೆ. 
ಉದಾಹರಣೆಗೆ : ಜೆ.ಸಿ.ಬಿ ಯ ಕಾರ್ಯ ವಿಧಾನವನ್ನು ಸೂಕ್ಷ್ಮವಾಗಿ ನೋಡಿದರೆ ಅರ್ಥ ಆಗುತ್ತದೆ.

*4. ಉದಾನ ವಾಯುವು* - ಇದು ನಾಲ್ಕನೇ ವಾಯು. ಇದು ವಾಕ್ಕಿಗೆ ಸಹಕಾರಿಯಾದ ವಾಯುವು.

*5. ಸಮಾನ ವಾಯು*- ಇದು ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿ ಯಾಗುತ್ತದೆ. ತಿಂದ ಆಹಾರ ಜೀರ್ಣವಾಗಲು ಸಹಾಯಕಾರಿ.

ಇವು ಐದು ರೀತಿಯ ಪ್ರಾಣಗಳು ಅಥವಾ ಪ್ರಾಣಯಾವುಗಳು...
ಇವುಗಳನ್ನು ಸರಿಯಾಗಿ ನಿಯಂತ್ರಣದಲ್ಲಿ ಇಟ್ಟುಕೊಂಡವನು ಮಹಾನ್ ಯೋಗಿಯಾಗುತ್ತಾನೆ...

ಶ್ರೀವಿದ್ಯಾ 🙏

No comments:

Post a Comment