🌺 #ಏಕಾದಶಿಗಳ_ಹೆಸರುಗಳು ಮತ್ತು ಅವುಗಳ ಫಲ 🌺
1. ಚೈತ್ರ ಶುಕ್ಲ ಏಕಾದಶಿ - ಕಾಮದಾ - ಕೋರಿಕೆಗಳನ್ನು ಪೂರೈಸುತ್ತದೆ.
2. ಚೈತ್ರ ಬಹುಳ ಏಕಾದಶಿ - ವರೂಧಿನಿ - ಸಹಸ್ರ ಗೋದಾನ ಫಲವು ಲಭಿಸುತ್ತದೆ.
3 . ವೈಶಾಖ ಶುದ್ಧ ಏಕಾದಶಿ - ಮೋಹಿನಿ - ದರಿದ್ರನು ಧನವಂತನಾಗುತ್ತಾನೆ.
4. ವೈಶಾಖ ಬಹುಳ ಏಕಾದಶಿ - ಅಪರಾ - ರಾಜ್ಯಪ್ರಾಪ್ತಿ
5 . ಜ್ಯೇಷ್ಠ ಶುಕ್ಲ ಏಕಾದಶಿ - ನಿರ್ಜಲ - ಆಹಾರ ಸಮೃದ್ಧಿ
6 . ಜ್ಯೇಷ್ಠ ಬಹುಳ ಏಕಾದಶಿ - ಯೋಗಿನಿ - ಪಾಪಗಳನ್ನು ಹರಿಸುತ್ತದೆ (ಪಾಪಗಳಿಂದ ಮುಕ್ತಗೊಳಿಸುತ್ತದೆ)
7 . ಆಷಾಢ ಶುದ್ಧ ಏಕಾದಶಿ - ದೇವಶಯನಿ - ಸಂಪತ್ ಪ್ರಾಪ್ತಿ - ವಿಷ್ಣುವು ಯೋಗನಿದ್ರೆಗೆ ಜಾರುವ ದಿನ
8 . ಆಷಾಢ ಬಹುಳ ಏಕಾದಶಿ - ಕಾಮಿಕಾ - ಬೇಡಿದ ವರಗಳು ಪ್ರಾಪ್ತಿಯಾಗುತ್ತವೆ.
9 . ಶ್ರಾವಣ ಶುಕ್ಲ ಏಕಾದಶಿ - ಪುತ್ರದಾ - ಸತ್ ಸಂತಾನ ಪ್ರಾಪ್ತಿ
10 . ಶ್ರಾವಣ ಬಹುಳ ಏಕಾದಶಿ - ಅಜಾ - ರಾಜ್ಯ, ಪತ್ನೀಪುತ್ರ ಪ್ರಾಪ್ತಿ ಮತ್ತು ಆಪತ್ ನಿವಾರಣೆ
11 . ಭಾದ್ರಪದ ಶುದ್ಧ ಏಕಾದಶಿ - ಪರಿವರ್ತನ (ಯೋಗ ನಿದ್ರೆಯಲ್ಲಿ ವಿಷ್ಣುವು ಪಕ್ಕಕ್ಕೆ ಹೊರಳುತ್ತಾನಂತೆ ಹಾಗಾಗಿ ಇದು ಪರಿವರ್ತನ) - ಯೋಗ ಸಿದ್ಧಿ
12 . ಭಾದ್ರಪದ ಬಹುಳ ಏಕಾದಶಿ - ಇಂದಿರಾ - ಸಂಪದಗಳು ಮತ್ತು ರಾಜ್ಯ ಪ್ರಾಪ್ತಿಯುಂಟಾಗುತ್ತದೆ.
13. ಆಶ್ವಯುಜ ಶುಕ್ಲ ಏಕಾದಶಿ - ಪಾಪಾಂಕುಶ - ಪುಣ್ಯಪ್ರದವಾದುದು
14 . ಆಶ್ವಯುಜ ಬಹುಳ ಏಕಾದಶಿ - ರಮಾ - ಸ್ವರ್ಗಪ್ರಾಪ್ತಿ
15 . ಕಾರ್ತೀಕ ಶುಕ್ಲ ಏಕಾದಶಿ - ಪ್ರಬೋಧಿನಿ (ಯೋಗ ನಿದ್ರೆಯಿಂದ ವಿಷ್ಣುವು ಎಚ್ಚರಗೊಳ್ಳುವ ದಿನ) - ಜ್ಞಾನಸಿದ್ಧಿ
16 . ಕಾರ್ತೀಕ ಬಹುಳ ಏಕಾದಶಿ - ಉತ್ಪತ್ತಿ - ದುಷ್ಟ ಸಂಹಾರ (ಮುರಾಸುರನನ್ನು ಸಂಹರಿಸಿದ ಕನ್ಯೆಯು ವಿಷ್ಣುವಿನ ಶರೀರದಿಂದ ಜನಿಸಿದ ದಿನ)
17 . ಮಾರ್ಗಶಿರ ಶುಕ್ಲ ಏಕಾದಶಿ - ಮೋಕ್ಷದಾ - ಮೋಕ್ಷಪ್ರಾಪ್ತಿ (ಮಾರ್ಗಶಿರ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*)
18 . ಮಾರ್ಗಶಿರ ಬಹುಳ ಏಕಾದಶಿ - ವಿಮಲಾ (ಸಫಲಾ) - ಅಜ್ಞಾನ ನಿವೃತ್ತಿ
19 . ಪುಷ್ಯ ಶುಕ್ಲ ಏಕಾದಶಿ - ಪುತ್ರದಾ - ಪುತ್ರಪ್ರಾಪ್ತಿ (ಪುಷ್ಯ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*)
*ವೈಕುಂಠ ಏಕಾದಶಿ ಮಾರ್ಗಶಿರ ಅಥವಾ ಪುಷ್ಯ ಮಾಸದಲ್ಲಿ ಬರುತ್ತದೆಂದು ಈ ಮುಂಚೆಯೇ ಹೇಳಿದೆ.
20 . ಪುಷ್ಯ ಕೃಷ್ಣ ಏಕಾದಶಿ - ಕಲ್ಯಾಣೀ (ಷಟ್‌ತಿಲಾ) - ಶಾರೀರಿಕ ಬಾಧೆಗಳಿಂದ ಮುಕ್ತಿ (ತೆಲುಗಿನಲ್ಲಿ ಈತಿ ಬಾಧಾ ನಿವಾರಣಂ ಎಂದು ಹೇಳಲಾಗಿದೆ)
21 . ಮಾಘ ಶುಕ್ಲ ಏಕಾದಶಿ - ಕಾಮದಾ (ಜಯಾ) - ಶಾಪವಿಮುಕ್ತಿ
22. ಮಾಘ ಕೃಷ್ಣ ಏಕಾದಶಿ - ವಿಜಯಾ - ಸಕಲ ಕಾರ್ಯ ವಿಜಯ (ಇದು ಭೀಷ್ಮೈಕಾದಶಿ ಎಂದು ಪ್ರಸಿದ್ಧಿಯಾಗಿದೆ)
23 . ಫಾಲ್ಗುಣ ಶುಕ್ಲ ಏಕಾದಶಿ - ಆಮಲಕೀ - ಆರೋಗ್ಯ ಪ್ರಾಪ್ತಿ
24 . ಫಾಲ್ಗುಣ ಕೃಷ್ಣ ಏಕಾದಶಿ - ಸೌಮ್ಯಾ - ಪಾಪ ವಿಮುಕ್ತಿ...... 🌺🌺🌺🌺🌺🌺
ಕೃಷ್ಣಾರ್ಪಣ ಮಸ್ತು
No comments:
Post a Comment